ಸ್ಟಾರ್ ನಟರಾದ ರಾಣಾ ದಾಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ ೨೫ ಖ್ಯಾತ ಸಿನಿಮಾ ತಾರೆಯರ ವಿರುದ್ಧ ಬೆಟ್ಟಿಂಗ್ ಆಪ್ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ತೆಲಂಗಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಸಿನಿಮಾ ತಾರೆಯರು ಅಲ್ಲದೇ ಇನ್ಫೂಯೆನ್ಸರ್ ಮುಂತಾದ ಹಲವು ಕ್ಷೇತ್ರಗಳ ಗಣ್ಯರ ವಿರುದ್ಧವೂ ತೆಲಂಗಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಮಚ್ಚು ಲಕ್ಷ್ಮೀ, ಪ್ರಣೀತಾ, ನಿಧಿ ಅಗರ್ವಾಲ್, ಅನನ್ಯ ನಾಗಲ್ಲಾ, ಸಿರಿ ಹನುಮಂತು, ಶ್ರೀಮುಖಿ, ವರ್ಷಿಣಿ ಸೌಂದರರಾಜನ್, ವಸಂತಿ ಕೃಷ್ಣನ್, ಶೋಭಾ ಶೆಟ್ಟಿ, ಅಮೃತಾ ಚೌಧರಿ, ನಯನಿ ಪಾವನಿ, ನೇಹಾ ಪಠಾಣ್, ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣುಪ್ರಿಯ, ಹರ್ಷ ಸಾಯಿ, ಸನ್ನಿ ಯಾದವ್, ಶ್ಯಾಮಲಾ, ಟೆಸ್ಟಿ ತೇಜಾ, ಬಂಡಾರು ಶೇಷಯಾನಿ ಸುಪ್ರಿತಾ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಬೆಟ್ಟಿಂಗ್ ಆಪ್ ಜಾಹಿರಾತುಗಳನ್ನು ತಮ್ಮ ಸಾಮಾಜಿಕ ಜಾಲತಾಣದ ವೇದಿಕೆಗಳಲ್ಲಿ ಪ್ರಚಾರ ಮಾಡಿದ್ದಾರೆ. ಈ ಹಗರಣದಲ್ಲಿ ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಪೊಲೀಸರು ದಾಖಲಿಸಿದ ಎಫ್ ಐಆರ್ ನಲ್ಲಿ ಆರೋಪಿಸಲಾಗಿದೆ.