
ಬೆಂಗಳೂರು,ಮೇ.26,ಉದಯಕಾಲ ನ್ಯೂಸ್: ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್ಎಸ್ ಅಧ್ಯಕ್ಷ ಚಂದ್ರಶೇಖರ್ ರಾವ್ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.
ಗುರುವಾರ ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕೆ ಆಗಮಿಸಿರುವ ಸಿಎಂ ಚಂದ್ರಶೇಖರ್ ರಾವ್ ಅವರು, ಹೆಚ್.ಡಿ. ದೇವೇಗೌಡ, ಅವರ ಪುತ್ರ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ.