ರಾಜ್ಯದಲ್ಲಿ ಹಠಾತ್ ಹೃದಯಘಾತದಿಂದ ಮಕ್ಕಳು, ಯುವಕರು ಸೇರಿದಂತೆ ಸಾವು ಪ್ರಕರಣಗಳು ಹೆಚ್ಚುತ್ತಿದ್ದು, ಹಠಾತ್ ಹೃದಯಘಾತ ತಡೆಯಲು ಆರೋಗ್ಯ ಇಲಾಖೆ ಕ್ರಮಕ್ಕೆ ಮುಂದಾಗಿದೆ.
ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಗೊಳಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಸ್ಥಳೀಯರಿಗೆ ಹೃದಯ ತಪಾಸಣೆಗೆ ಅನುಕೂಲ ಆಗಲಿದೆ.
ಇಸಿಜಿ ಜೊತೆಗೆ ಟೆನೆಕ್ಟೆಪ್ಲೇಸ್ ಚುಚ್ಚುಮದ್ದು ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲು ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಯಲ್ಲಿದೆ.
ಮಂಗಳೂರು ವೆನ್ ಲಾಕ್ ಆಸ್ಪತ್ರೆ, ಬೆಂಗಳೂರು ಸಿವಿ ರಾಮನ್ ನಗರ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್ ಲ್ಯಾಬ್ ತೆರೆಯಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.