Menu

ಮೆಟ್ರೋ ಪಿಲ್ಲರ್, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಟೆಂಡರ್ : ಡಿ.ಕೆ.ಶಿವಕುಮಾರ್

“ಮೆಟ್ರೋ ಪಿಲ್ಲರ್ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ.

ವಿಧಾನಸೌಧದಲ್ಲಿ ನೂತನ ವಿದ್ಯುತ್ ದೀಪ ಅಲಂಕಾರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹಾಗೂ ನಂತರ ಮಾಧ್ಯಮಗಳೊಂದಿಗೆ  ಮಾತನಾಡಿದರು.

“ಸರ್ಕಾರದ ಆಸ್ತಿಗಳಲ್ಲಿ ದೀಪಾಲಂಕಾರ ಮಾಡುತ್ತೇವೆ, ಖಾಸಗಿ ಸ್ಥಳ, ಕಟ್ಟಡಗಳಲ್ಲಿ ದೀಪಾಲಂಕಾರ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ ಸುಮಾರು 40 ಕಡೆ ದೀಪಾಲಂಕಾರಕ್ಕೆ ಸ್ಥಳಗಳನ್ನು ಗುರುತಿಸಲಾಗಿದೆ. ಯಾವ, ಯಾವ ಸ್ಥಳಗಳು ಎಂದು ಅಧಿಕಾರಿಗಳು ತಿಳಿಸಲಿದ್ದಾರೆ. ಇನ್ನು ಬೆಂಗಳೂರು ನಗರದಲ್ಲಿ ಎಲ್ ಇಡಿ ದೀಪ ಬಳಸಲಾಗುವುದು. ಈ ಹಿಂದೆ ಕರೆಯಲಾಗಿದ್ದ ಟೆಂಡರ್ ವಿಫಲವಾಗಿದ್ದು, ಮರು ಟೆಂಡರ್ ಕರೆಯಲಾಗುವುದು. ಡಿಪಿಆರ್ ಕೂಡ ಸಿದ್ದಪಡಿಸಲಾಗಿದೆ” ಎಂದು ಹೇಳಿದರು.

“ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಮ್ಮ ಕಾಲದಲ್ಲಿ ಸಾಕ್ಷಿಗುಡ್ಡೆಗಳನ್ನು ಸೃಷ್ಟಿ ಮಾಡಬೇಕು ಎಂದು ಸುವರ್ಣ ಸೌಧ ಹಾಗೂ ವಿಧಾನಸೌಧ, ವಿಕಾಸಸೌಧಕ್ಕೆ ದೀಪಾಲಂಕಾರ ಮಾಡಿಸಿದ್ದಾರೆ. ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆ ಸ್ಥಾಪನೆ ವೇಳೆ ನಾನು ಹಾಗೂ ಯು.ಟಿ.ಖಾದರ್ ಅವರು ಹಾಗೂ ನಾನು ಈ ಬಗ್ಗೆ ಚರ್ಚೆ ನಡೆಸಿದ್ದೆವು. ಇಂದು ಈ ಕೆಲಸ ಕಾರ್ಯಗತವಾಗಿದೆ” ಎಂದರು.

“ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ನಾವೆಲ್ಲರೂ ಬೆಂಬಲವಾಗಿ ನಿಂತು ವಿಕಾಸಸೌಧ, ಉದ್ಯೋಗ ಸೌಧ ನಿರ್ಮಾಣ ಮಾಡಿ ಇತಿಹಾಸ ಸೃಷ್ಟಿಯಾಯಿತು. ಒಮ್ಮೆ ರಾಜೀವ್ ಗಾಂಧಿ ಅವರು ಬೆಂಗಳೂರಿಗೆ ಬಂದಾಗ ಜಿಪಿಓ ಕಚೇರಿಯು ವಿಧಾನಸೌಧದ ವಾಸ್ತುಶಿಲ್ಪವನ್ನು ಹೊಂದಿರಬೇಕು ಎಂದು ಸಲಹೆ ನೀಡಿದ್ದರು. ಈ ವೇಳೆ ಆಸ್ಕರ್ ಫರ್ನಾಂಡೀಸ್ ಕೂಡ ಇದ್ದರು” ಎಂದು ಹೇಳಿದರು.

Related Posts

Leave a Reply

Your email address will not be published. Required fields are marked *