ಶಿರಾ  ಮತ್ತು ಆರ್ ಅರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ  ಈಗಾಗಲೇ ಗೆದ್ದಾಗಿದೆ.  :  ಬಿ.ಎಸ್. ಯಡಿಯೂರಪ್ಪ  ವಿಶ್ವಾಸ 

ಮೈಸೂರು, ಅ 17  :ಶಿರಾ  ಮತ್ತು ಆರ್ ಅರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ  ಈಗಾಗಲೇ ಗೆದ್ದಾಗಿದೆ. ಗೆಲುವಿನ ಅಂತರವಷ್ಟೇ ಬಾಕಿಯಿದೆ. ಮೈಸೂರಿನಲ್ಲಿ ನಾಡ ಹಬ್ಬ ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆಯ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಅವರು  ಶಿರಾ  ಮತ್ತು ಆರ್ ಅರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ  ಈಗಾಗಲೇ ಗೆದ್ದಾಗಿದೆ. ಗೆಲುವಿನ ಅಂತರವಷ್ಟೇ ಬಾಕಿಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಹದಿಂದ ಮನೆ ಕಳೆದುಕೊಂಡ ಜನರಿಗೆ ತಕ್ಷಣಕ್ಕೆ 10 ಸಾವಿರ ರೂಪಾಯಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೇಂದ್ರದಿಂದ ಪರಿಹಾರ, ನೆರವು   ಪಡೆಯುವ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ ಎಂದರು. ಪ್ರವಾಹದಿಂದ ಮನೆ ಕಳೆದುಕೊಂಡ ಜನರಿಗೆ ತಕ್ಷಣಕ್ಕೆ 10 ಸಾವಿರ ರೂಪಾಯಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಇನ್ನು ಉತ್ತರ ಕರ್ನಾಟಕದ ನೆರೆ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿ.12 ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಮಾಹಿತಿ  ಪಡೆಯಲಾಗಿದೆ. 10 ಸಾವಿರಕ್ಕೂ  ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ವಾರದೊಳಗೆ ಅಂದಾಜು ನಷ್ಟದ ವರದಿ ಸಲ್ಲಿಸುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ ಎಂದರು. ಅನುದಾನದ ಕೊರತೆ ಇಲ್ಲ, ಎನ್ಡಿಆರ್ಎಫ್ ನಿಧಿಯಲ್ಲಿ ಹಾನಿಯಾದವರಿಗೆ,  ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ ನೀಡಲಾಗುವುದು. ತಕ್ಷಣಕ್ಕೆ  ಹಾನಿಗೊಳಗಾದವರಿಗೆ 10 ಸಾವಿರ ನೀಡಲು ಸೂಚನೆ ನೀಡಲಾಗಿದೆ.  ಕೇಂದ್ರ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಿ ಅಗತ್ಯ ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

, ,

Leave a Reply

Your email address will not be published. Required fields are marked *