ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಮೃತಪಟ್ಟಿದ್ದು, ಅವರ ಶವ ಶ್ರೀರಂಗ ಪಟ್ಟಣದ ಸಾಯಿ ಆಶ್ರಮ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.
ಮೈಸೂರಿನ ಅಪಾರ್ಟ್‍ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದ ಡಾ.ಸುಬ್ಬಣ್ಣ ಅವರು ಮೇ 7ರಂದು ಅವರು ಮನೆಯಿಂದ ನಾಪತ್ತೆಯಾಗಿದ್ದರು. ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.
ಪೊಲೀಸರು ಸ್ಥಳಕ್ಕೆ ಬಂದು ಶವ ಮೇಲೆತ್ತಿಸಿದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ.
ನದಿ ದಡದಲ್ಲಿ ಅವರ ದ್ವಿಚಕ್ರ ವಾಹನ ಕೂಡ ಪತ್ತೆಯಾಗಿದೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.