Menu

ಕಾಗೆ ಎತ್ತಿಕೊಂಡು ಹೋಗಿದ್ದ ಚಿನ್ನದ ಬಳೆ ಮೂರು ವರ್ಷ ಬಳಿಕ ಕೈಗೆ

ಕೇರಳದ ಮಲಪ್ಪುರಂನ ತ್ರಿಕ್ಕಲಂಗೋಡ್‌ನಲ್ಲಿ ಮೂರು ವರ್ಷದ ಹಿಂದೆ ಕಾಗೆಯೊಂದು ಮಹಿಳೆಯ ಚಿನ್ನದ ಬಳೆ ಎತ್ತಿಕೊಂಡು ಹೋಗಿದ್ದು, ಅದು ಈಗ ಕೈ ಸೇರಿದೆ. ಮೂರು ವರ್ಷದ ಹಿಂದೆ ರುಕ್ಮಿಣಿ ಎಂಬಾಕೆ ಕೆಲಸ ಮಾಡುವಾಗ 12 ಗ್ರಾಂ ಚಿನ್ನದ ಬಳೆಯನ್ನು ಕೈಯಿಂದ ತೆಗೆದಿಟ್ಟಿದ್ದರು. ತಕ್ಷಣ ಕಾಗೆಯೊಂದು ಅವರ ಬಳೆಯನ್ನು ಎತ್ತಿಕೊಂಡು ಹಾರಿತ್ತು.

ಬಳೆಗಾಗಿ ಸ್ವಲ್ಪ ದಿನ ಹುಡುಕಾಡಿದ ರುಕ್ಮಿಣಿ ಕುಟುಂಬಸ್ಥರು ಬಳಿಕ ಸುಮ್ಮನಾಗಿದ್ದರು. ಮೂರು ತಿಂಗಳ ಹಿಂದೆ ಅನ್ವರ್ ಸಾದತ್ ಎಂಬವರು ತೆಂಗಿನಕಾಯಿ ಕೀಳಲು ಹೋದ ವೇಳೆ ಮಗಳಿಗಾಗಿ ಮಾವು ಕೀಳಲು ಅನುಮತಿ ಪಡೆದು ಮರ ಹತ್ತಿ ಕೊಂಬೆ ಅಲ್ಲಾಡಿಸಿದ್ದಾರೆ. ಆಗ ಹೊಳೆಯುತ್ತಿರುವ ವಸ್ತೊಂದು ಮರದಿಂದ ಕೆಳಗೆ ಬಿದ್ದಿದ್ದು ಅನ್ವರ್‌ ಮಗಳು ಫಾತಿಮಾ ಹುದಾ ಗಮನಿಸಿದ್ದಾಳೆ. ಬಳಿಕ ಪರಿಶೀಲಿಸಿದಾಗ ಬಳೆ ತುಂಡಾಗಿದ್ದು ಚಿನ್ನವೆಂಬುದು ಖಚಿತವಾಗಿದೆ. ರುಕ್ಮಿಣಿ ಅವರ ಮನೆಯಿಂದ 50 ಮೀಟರ್ ದೂರದಲ್ಲೇ ಈ ಚಿನ್ನದ ಬಳೆ ಪತ್ತೆಯಾಗಿದೆ. ಅನ್ವರ್ ಸಾದತ್ ಈ ಚಿನ್ನದ ಬಳೆಯನ್ನು ಊರಿನ ಲೈಬ್ರರಿಗೆ ಕೊಟ್ಟು ಮಾಲೀಕರ ಕೈಸೇರಲಿ ಎಂದು ಪ್ರಾಮಾಣಿಕತೆ ಮೆರೆದಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಪತಿಯೊಂದಿಗೆ ಲೈಬ್ರರಿಗೆ ತೆರಳಿದ ರುಕ್ಮಿಣಿ ಬಳೆ ತನ್ನದೇ ಎಂದು ಖಚಿತಪಡಿಸಿಕೊಂಡಿದ್ದಾರೆ. ಕಳೆದು ಹೋಗಿದ್ದ ಚಿನ್ನದ ಬಳೆ ನೋಡಿ ಒಡತಿ ರುಕ್ಮಿಣಿ ಸಂತೋಷಗೊಂಡಿದ್ದರು. ಪತ್ತೆ ಹಚ್ಚಿದವರ ಕೈಯಿಂದಲೇ ಬಳೆ ಪಡೆಯಬೇಕು ಎಂಬ ಮನವಿಯಂತೆ ಊರಿನವರು ಅನ್ವರ್ ಸಾದತ್ ಕೈಯಿಂದಲೇ ರುಕ್ಮಿಣಿ ಅವರಿಗೆ ಬಳೆಯನ್ನು ಮರಳಿ ಕೊಡಿಸಿದ್ದಾರೆ. ಬಳೆಯನ್ನು ಪಡೆದ ರುಕ್ಮಿಣಿ ಈ ಬಳೆಯನ್ನು ಮರಳಿ ಪಡೆಯುತ್ತೇನೆ ಎಂದು ಭಾವಿಸಿರಲಿಲ್ಲ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *