Sunday, September 07, 2025
Menu

ಕುಂಭಮೇಳದ ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕನ ಬಂಧನ

ಕುಂಭಮೇಳದಲ್ಲಿ ವೈರಲ್ ಆಗಿದ್ದ ಹುಡುಗಿ ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು  ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬಳಿಕ ದೆಹಲಿ ಪೊಲೀಸರು ಬಂಧಿಸಿ ದ್ದಾರೆ.

ಮುಂಬೈನಲ್ಲಿ ಕುಟುಂದ ಜೊತೆ ವಾಸವಾಗಿದ್ದ ಸನೋಜ್ ಮಿಶ್ರಾ (45) ಗಾಜಿಯಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದು, ಗುಪ್ತಚರ ಇಲಾಖೆ ಮಾಹಿತಿ ಹಾಗೂ ತಂತ್ರಜ್ಞಾನದ ಮಾಹಿತಿ ಆಧರಿಸಿ ಬಂಧಿಸಲಾಗಿದೆ.

ನಾಲ್ಕು ವರ್ಷ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು 28 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ತನಿಖೆ ನಡೆಯುತ್ತಿದೆ. ಸಿನಿಮಾದಲ್ಲಿ ನಟಿಯಾಗುವ ಆಸೆ ವ್ಯಕ್ತಪಡಿಸಿದ್ದ ಮಹಿಳೆಯ ಜೊತೆ ನಾಲ್ಕು ವರ್ಷಗಳಿಂದ ಲಿವ್‌ ಇನ್ ರಿಲೇಷನ್ ಶಿಪ್ ನಲ್ಲಿದ್ದ ಸನೋಜ್ ಮಿಶ್ರಾ ನಂತರ ಸಿನಿಮಾದಲ್ಲೂ ಅವಕಾಶ ಕೊಡದೆ ಮದುವೆ ಆಗದೆ ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಮೂರು ಬಾರಿ ಸನೋಜ್ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ. 2024 ಮಾರ್ಚ್ 6ರಂದು ಪ್ರಕರಣ ದಾಖಲಾಗಿದ್ದು, ಮದುವೆ ಆಗುವುದಾಗಿ ವಂಚನೆ, ದೈಹಿಕ ಹಲ್ಲೆ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

Related Posts

Leave a Reply

Your email address will not be published. Required fields are marked *