Menu

ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದು ವೈದ್ಯನ ಪತ್ನಿ: ಸಾರ್ವಜನಿಕರ ಆರೋಪ

ಬಾಗಲಕೋಟೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ವೈದ್ಯನ ಬದಲು ಪತ್ನಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದಾಗಿ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ.

ಈ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರುವುದು ಹೆಚ್. ವಿ. ಲೇಬಗಿರಿ. ಆಸ್ಪತ್ರೆಗೆ ಸಂಬಂಧಪಟ್ಟ ಯಾವುದೇ ಹುದ್ದೆಯಲ್ಲಿ ಇಲ್ಲದ ಅವರ ಪತ್ನಿ ರೋಗಿಗಳಿಗೆ ಚಿಕಿತ್ಸೆ ಮತ್ತು ಔಷಧ ವಿತರಣೆ ಮಾಡುತ್ತಿದ್ದಾರೆ, ಪತಿ ಜೊತೆಗೆ ಆಸ್ಪತ್ರೆಗೆ ಬಂದು ವೈದ್ಯರಂತೆ  ಚೇರ್​​ನಲ್ಲಿ ಕುಳಿತು ರೋಗಿಗಳ ತಪಾಸಣೆ ಮಾಡುತ್ತಾರೆ. ಸಾಮಾನ್ಯ ರೋಗಿಗಳಿಗೆ ಮಾತ್ರವಲ್ಲದೆ ಗರ್ಭಿಣಿಯರಿಗೂ ಚಿಕಿತ್ಸೆ ನೀಡುತ್ತಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದರಿಂದ ರೋಗಿಗಳ ಆರೋಗ್ಯದ ಮೇಲೆ ಏನಾದರೂ ವ್ಯತಿರಿಕ್ತ ಪರಿಣಾಮವಾದರೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಆಸ್ಪತ್ರೆಯ ವೈದ್ಯಾಧಿಕಾರಿ ಹೆಚ್. ವಿ. ಲೇಬಗಿರಿ ಅವರನ್ನು ಸ್ಥಳೀಯರು ಈ ವಿಚಾರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಿಸ್ಕ್ರಿಪ್ಶನ್​​ನಲ್ಲಿ ಇರುವುದು ತನ್ನ ಪತ್ನಿಯ ಬರಹ ಅಲ್ಲ ಎಂದು ಲೇಬಗಿರಿ ವಾದಿಸಿದ್ದು, ಮೊಬೈಲ್​​ನಲ್ಲಿ ಮಾತನಾಡುವ ನೆಪದಲ್ಲಿ ವೈದ್ಯಾಧಿಕಾರಿಯ ಪತ್ನಿ ಆಸ್ಪತ್ರೆಯಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ. ಈ ವಿಚಾರದಲ್ಲಿ ಸಂಬಂಧಿಸಿದ ಇಲಾಕೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related Posts

Leave a Reply

Your email address will not be published. Required fields are marked *