Menu

ನಾಳೆ ಮಧ್ಯಾಹ್ನ ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ

salumarada timmakka

ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು.

ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *