Thursday, January 30, 2025
Menu

ಯುವಕರನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗಯೋಗ್ಯ ಮಾಡುವುದೇ  ಗುರಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಯುವ ಸಮೂಹಕ್ಕೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಯೋಗ್ಯರನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಕೌಶಲ್ಯ, ಜಾಗತಿಕವಾಗಿ ಕೆಲಸ ಮಾಡಲು ನಮ್ಮ ಯುವಕರನ್ನು ಸಜ್ಜು ಮಾಡುವುದೇ ನಮ್ಮ ಮುಖ್ಯ ಗುರಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಉ ಕೌಶಲ್ಯಾಭಿವೃದ್ಧಿ ನಿಗಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಕೈಗಾರಿಕೋದ್ಯಮಿಗಳ ಜೊತೆ ನಡೆಸಿದ ಸಂವಾದದಲ್ಲಿ ಸಚಿವರು ಈ ವಿಷಯ ತಿಳಿಸಿದರು. ನಮ್ಮ ಯುವಕರು, ಯುವತಿಯರು ಥಿಯರಿಯಲ್ಲಿ ಸಾಕಷ್ಟು ಶಿಕ್ಷಣ ಪಡೆದಿರುತ್ತಾರೆ. ಆದರೆ ಅವರಿಗೆ ಪ್ರಾಕ್ಟ್ರಿಕಲ್ ತರಬೇತಿ ನೀಡುವ ಕುರಿತು ಕ್ರಮ ಕೈಗೊಳ್ಳುತ್ತಿದ್ದೇವೆ. ಇದರಿಂದ ಕೆಲಸಕ್ಕೆ ಅಗತ್ಯವಿರುವಂಥ ಕೌಶಲ್ಯ ತರಬೇತಿ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಸಚಿವರು ತಿಳಿಸಿದರು.

ಒಂದು ವೇಳೆ ಅಗತ್ಯವಿರುವಂಥ ಯುವ ಸಮೂಹಕ್ಕೆ ಕೌಶಲ್ಯ ತರಬೇತಿಯನ್ನು ಉದ್ದಿಮೆಗಳು ನೀಡಿದರೆ ಇದಕ್ಕೆ ಅಗತ್ಯವಿರುವಂಥ ಅನುದಾನವನ್ನು ಸರ್ಕಾರವೇ ಭರಿಸುವ ಚಿಂತನೆ ಇದೆ. ಈ ನಿಟ್ಟಿನಲ್ಲಿ ಉದ್ದಿಮೆಗಳಿಂದ, ಉದ್ಯಮಿಗಳು ಅಗತ್ಯವಿದ್ದರೆ ತರಬೇತಿ ಪಡೆದವರಿಗೆ ಉದ್ಯೋಗ ನೀಡುವ ಬದ್ಧತೆ ತೋರಬೇಕು ಎಂದು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಪೂರಕವಾಗಿರುವಂತೆ ಕೌಶಲ್ಯ ತರಬೇತಿಯನ್ನು ನೀಡಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಈಗಾಗಲೇ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ ಬಹುಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಲು ಮುಂದಾಗಿದೆ. ಸ್ಕಿಲ್ ಲೋಕಲಿ, ವರ್ಕ್ ಗ್ಲೋಬಲಿ ಎಂಬುದು ನಮ್ಮ ಮೂಲಮಂತ್ರವಾಗಿದೆ ಎಂದು ಶರಣ್ ಪ್ರಕಾಶ್ ತಿಳಿಸಿದರು.

ಇದೇ ವೇಳೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ್ ಅವರ ಕಚೇರಿಯನ್ನು ಸಚಿವ ಶರಣ್ ಪ್ರಕಾಶ್ ಪಾಟೀಲ್ ಉದ್ಘಾಟಿಸಿದರು. ಹಾಗೂ ಇಲಾಖೆ ವತಿಯಿಂದ ಹೊರತರಲಾಗಿರುವ “ನನ್ನ ವೃತ್ತಿ ನನ್ನ ಆಯ್ಕೆ” ಎಂಬ ಪುಸ್ತಕವನ್ನೂ ಬಿಡುಗಡೆ ಮಾಡಿದರು.

ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇದೆ. ಆದರೆ ಕರ್ನಾಟಕದಲ್ಲಿ ನಮ್ಮ ಸರ್ಕಾರ ಹೆಚ್ಚಿನ ಉದ್ಯೋಗ ಅವಕಾಶ ಸೃಷ್ಟಿಸಲು ಮುಂದಾಗಿದೆ. ಯುವಕರಿಗೆ ಉದ್ಯೋಗ ಕೊಡಿಸುವುದೇ ನಮ್ಮ ಧ್ಯೇಯ ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *