Thursday, January 22, 2026
Menu

ವಿಶೇಷ ಅಧಿವೇಶನಕ್ಕೆ ಬಂದು ಭಾಷಣ ಮಾಡದೆ ವಾಪಸಾದ ಗವರ್ನರ್‌ ಗೆಹ್ಲೋಟ್

NREGA ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡದೆ  ರಾಜ್ಯಪಾಲರಾದ  ಥಾವರ್​ಚಂದ್ ಗೆಹ್ಲೋಟ್  ಶುಭಾಶಯ ಕೋರಿ ಹೊರ ನಡೆದಿದ್ದಾರೆ.

ಈ ಬೆಳವಣಿಗೆ ರಾಜ್ಯಪಾಲರು ಮತ್ತು ಸರ್ಕಾರದ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುವ ಬಗ್ಗೆ ಅನುಮಾನವಿತ್ತು. ಬಂದ ರಾಜ್ಯಪಾಲರು ಒಂದೆರಡು ಮಾತನಾಡಿ ಶುಭಾಶಯ ಕೋರಿ ಸರ್ಕಾರ ನೀಡಿದ ಭಾಷಣದ ಪ್ರತಿ ಓದದೆ ವಾಪಸ್‌ ಹೋಗಿದ್ದಾರೆ.

ಈ ವೇಳೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ 11 ಅಂಶ ತೆಗೆಯುವಂತೆ ರಾಜ್ಯಪಾಲರು ಸೂಚಿಸಿದ್ದರು. ಆದರೆ ಸರ್ಕಾರ ಒಪ್ಪಿಲ್ಲ. ರಾಜ್ಯಪಾಲರು ವಿಧಾನಸಭೆಗೆ ಬಾರದಿದ್ದರೆ ಮುಂದಿನ ಕಾನೂನು ಕ್ರಮಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಕ್ಕೆ ಸರ್ಕಾರ ಸಿದ್ಧತೆ ನಡೆಸಿತ್ತು.

ರಾಜ್ಯಪಾಲರು ವಿಧಾನಸಭೆಗೆ ಬಂದು ಭಾಷಣ ಆರಂಭಿಸಿ ಸರ್ಕಾರ ಸಿದ್ಧಪಡಿಸಿದ ಭಾಷಣದ ಮೊದಲ ಮತ್ತು ಕೊನೆಯ ಪ್ಯಾರದ ಒಂದೆರಡು ಸಾಲು ಓದಿ ಶುಭಾಶಯ ಕೋರಿ ಅಲ್ಲಿಂದ ನಿರ್ಗಮಿಸಿದರು. ರಾಜ್ಯಪಾಲರು ನಿರ್ಗಮಿಸುತ್ತಿದ್ದಂತೆಯೇ ಡೆಯಲು ಎಂಎಲ್‌ಸಿ ಬಿಕೆ ಹರಿಪ್ರಸಾದ್ ಮುಂದಾದರು. ಕಾಂಗ್ರೆಸ್ ಪಕ್ಷದ ಶಾಸಕರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರು ಅಂಕಿತ ಹಾಕಿರುವ ರಾಜ್ಯಪಾಲರು ದ್ವೇಷ ಭಾಷಣ ಮಸೂದೆ ಸೇರಿದಂತೆ 2 ಮಸೂದೆಗಳಿಗೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಶುಕ್ರವಾರ (ಜ.9) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿ, ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮಸೂದೆ ಹಾಗೂ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ವಿಧೇಯಕಗಳನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ.

ಆರ್‌ ಅಶೋಕ ವಾಗ್ದಾಳಿ

ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, “ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು. ಅವರ ಘನತೆಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ಫೆಡರಲ್ ವ್ಯವಸ್ಥೆಯ ಮೇಲೆ ನೇರ ದಾಳಿ ನಡೆಸುತ್ತಿದೆ” ಎಂದು ಹೇಳಿದರು.

ಕೇರಳ, ತಮಿಳುನಾಡುಗಳಲ್ಲೂ ಇಂತಹ ಪ್ರಕರಣ ವರದಿಯಾಗಿತ್ತು. ಕಾನೂನು ತಜ್ಞರ ಪ್ರಕಾರ ರಾಜ್ಯಪಾಲರ ಭಾಷಣವಿಲ್ಲದೆ ವಿಧಾನಸಭೆ ಕಲಾಪಗಳನ್ನು ನಡೆಸಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು ಭಾಷಣ ಮಾಡದೆ ಸದನದಿಂದ ಹೊರ ನಡೆದಿದ್ದರು. ಭಾಷಣದಲ್ಲಿ ಆಧಾರರಹಿತ ಹೇಳಿಕೆಗಳಿವೆ ಎಂದು ಆರೋಪಿಸಿದ್ದರು. ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರು ಭಾಷಣದ ಕೆಲವು ಅಂಶಗಳನ್ನು ಕೈಬಿಟ್ಟು ಓದಿದ್ದಾರೆ ಎಂದು ದೂರಿದ್ದರು. ಸಂವಿಧಾನದ 176ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಸರ್ಕಾರ ನೀಡಿದ ಭಾಷಣವನ್ನು ಓದಬೇಕು ಎಂದು ಸ್ಪಷ್ಟಪಡಿಸಲಾಗಿದೆ.

Related Posts

Leave a Reply

Your email address will not be published. Required fields are marked *