40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ @INCKarnataka ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ. ಸ್ವಾಮಿ ಸಿಎಂ @siddaramaiah ನವರೇ ಹಾಗು ಡಿಸಿಎಂ @DKShivakumar ಅವರೇ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ.
ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ. 63% ಭ್ರಷ್ಟಾಚಾರ ಇದೆ ಸ್ವತಃ ಮಾನ್ಯ ಉಪಲೋಕಾಯುಕ್ತರೇ ತಮ್ಮ ಘನ ಸರಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ @INCKarnataka ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ.
ಸ್ವಾಮಿ ಸಿಎಂ @siddaramaiah ನವರೇ ಹಾಗು ಡಿಸಿಎಂ @DKShivakumar ಅವರೇ,
ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ… pic.twitter.com/MKbkVJ4wzu
— R. Ashoka (@RAshokaBJP) December 4, 2025
ಸಾಮಾಜಿಕ ಂಆಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದು ಬರೆದುಕೊಂಡಿದ್ದಾರೆ.
ಮತ್ತೊಂದು ಪೋಸ್ಟ್‌ನಲ್ಲಿ ಅಶೋಕ ಅವರು, ಸಿಎಂ @siddaramaiah ನವರೇ,ಕಾಂಗ್ರೆಸ್ ಪಕ್ಷಕ್ಕೆ ಸೇರಿ ಸರಿಸುಮಾರು 20 ವರ್ಷಗಳಾದ ಮೇಲೆ ಮೊಟ್ಟಮೊದಲ ಬಾರಿಗೆ ಡಿಸಿಎಂ @DKShivakumar ಅವರ ಮನೆಗೆ ಭೇಟಿ ನೀಡಿ, ನಾಟಿಕೋಳಿ ತಿಂಡಿ ತಿಂದು “ಹೋಮ್ ಟೂರ್” ಮಾಡಿಕೊಂಡು ಬಂದಿದ್ದೀರಿ ಎಂದು ಟೀಕಿಸಿದ್ದಾರೆ.
ಮುಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ಎಲ್ಲಿ, ಯಾರ ಜೊತೆ ಅಂತ ನಿಮ್ಮ ಹೈಕಮಾಂಡ್ ಏಜೆಂಟ್ @kcvenugopalmp ಅವರು ಆದೇಶ ಕೊಡುವುದಕ್ಕೂ ಮುಂಚೆ ಒಮ್ಮೆ “ಸರ್ಕಾರಿ ಸ್ಕೂಲ್ ಟೂರ್” ಮಾಡಿಕೊಂಡು ಬನ್ನಿ ಸ್ವಾಮಿ. ಶೌಚಾಲಯಗಳೇ ಇಲ್ಲದ ಶಾಲೆಗಳು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳು, ಬಿದ್ದು ಹೋಗುತ್ತಿರುವ ಗೋಡೆಗಳು, ಶಿಕ್ಷಕರಿಲ್ಲದ ತರಗತಿಗಳನ್ನು ಒಮ್ಮೆ ಕಣ್ತುಂಬಿಕೊಂಡು ಬನ್ನಿ ಸಿದ್ದರಾಮಯ್ಯನವರೇ.ಇಂತಹ ಲಜ್ಜೆಗೆಟ್ಟ ಸರ್ಕಾರವನ್ನ ಇಡೀ ಪ್ರಪಂಚದ ಇತಿಹಾಸದಲ್ಲೇ ಕಾಣಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.


