ಬೆಂಗಳೂರು,ಆ.26 ಬಿಜೆಪಿ ಸರಕಾರ ಬಂದ ಮೇಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ವಿಧ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಬೆಂಗಳೂರಿನಲ್ಲಿ ನಡೆದ ಪ್ರತಿಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಲೀಂ ಅಹ್ಮದ್, ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ರಾಜ್ಯದ ಜನತೆಯನ್ನು ತಲೆತಗ್ಗಿಸುವಂತೆ ಮಾಡಿದೆ.ನಮ್ಮ ರಾಜ್ಯದಲ್ಲಿ ಇಂತಹ ಘಟನೆ ನಡೆದಿದ್ದು ಖಂಡನೀಯ.ಅತ್ಯಾಚಾರ ಆರೋಪಿಗಳನ್ನು ಕೂಡಲೇ ಬಂಧಿಸಿ, ಪ್ರಕರಣದ ಹಿಂದೆ ಎಷ್ಟು ದೊಡ್ಡ ಪ್ರಭಾವಿ ವ್ಯಕ್ತಿಗಳಿದ್ದರೂ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮುಖ್ಯಮಂತ್ರಿಗಳು ಗೃಹ ಸಚಿವರ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.
