ಬಾಕಿಯುಳಿದಿರುವ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಕುರಿತು ರಣ್‌ದೀಪ್ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಲಾಯಿತು, ಅದರೆ ಚರ್ಚೆ ಅಪೂರ್ಣವಾಗಿದೆ, ಅವರು ಜುಲೈ 16 ಬೆಂಗಳೂರಿಗೆ ಬರಲಿದ್ದಾರೆ, ಆಗ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ಎಐಸಿಸಿ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ದೆಹಲಿಯಲ್ಲಿ ಡಿಕೆ ಶಿವಕುಮಾರ್ ಮತ್ತು ನಾನು ನಿಗಮ-ಮಂಡಳಿಗಳಿಗೆ ಕಾರ್ಯಕರ್ತರ ನೇಮಕದ ಬಗ್ಗೆ ರಣ್‌ದೀಪ್ ಸುರ್ಜೇವಾಲಾ ಅವರೊಂದಿಗೆ ಚರ್ಚಿ ನಡೆಸಿರುವುದಾಗಿ ಸಿಎಂ ತಿಳಿಸಿದರು.