Menu

ಪ್ರಧಾನಿಗೆ ಮತ್ತೊಬ್ಬರ ಉಡುಗೊರೆ ನೀಡುವ ದುಸ್ಥಿತಿ ಬಂದಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

dcm gift

ಬೆಂಗಳೂರು: ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅಂದಿನ ಸಮಾರಂಭದಲ್ಲಿ ತಾವು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ ಎಂದರು.

ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್ಪಿಜಿ ತಪಾಷಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು. ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಆ. 10 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭ ನಡೆದದನ್ನು ಇಲ್ಲಿ ಸ್ಮರಿಸಬಹುದು.

Related Posts

Leave a Reply

Your email address will not be published. Required fields are marked *