ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ; ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ; ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ

ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಇಲ್ಲ, ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ಮುಖ್ಯಮಂತ್ರಿ ಹುದ್ದೆ ಬದಲಾವಣೆ, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆ ಎಂದು ಪದೇ ಪದೇ ಕೇಳಿಬರುತ್ತಿರುವ ಮಾತುಗಳು, ಊಹಾಪೋಹಗಳಿಗೆ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಜೂನ್ 17 ಅಥವಾ 18 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೋವಿಡ್-19 ಸಂಕಷ್ಟದ ಸಮಯದಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ, ಕೋವಿಡ್ ಸಮಸ್ಯೆಗಳನ್ನು ಚೆನ್ನಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ, ಅವರ ಕೆಲಸದ ಬಗ್ಗೆ ವರಿಷ್ಠರಿಗೆ ಸಮಾಧಾನವಿದೆ, ಹೀಗಾಗಿ ಮುಖ್ಯಮಂತ್ರಿಯ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.

, ,

Leave a Reply

Your email address will not be published. Required fields are marked *