ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿದ್ದ ಬಿಎಂಆರ್ಸಿಎಲ್ ಕ್ರಮದ ಸಂಬಂಧ ಕೇಂದ್ರ ಸರ್ಕಾರ ವರದಿ ಕೇಳಿದ್ದು, ಸದ್ಯದ ಮಟ್ಟಿಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಈ ವರ್ಷ ಇಲ್ಲ ಎಂದು ಹೇಳಲಾಗುತ್ತಿದೆ.
ಕಳೆದ ವಾರ ಟಿಕೆಟ್ ದರ ಏರಿಕೆ ಸಂಬಂಧ ಬಿಎಂಆರ್ಸಿಎಲ್ ಸಭೆ ನಡೆಸಿ ಶೇ 45ರಷ್ಟು ದರ ಹೆಚ್ಚಳ ಮಾಡಲು ನಿರ್ಧರಿಸಿತ್ತು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ ಎನ್ನಲಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳವಾಗಿದೆ. ಈ ಸಂದರ್ಭದಲ್ಲಿ ಮತ್ತೆ ಮೆಟ್ರೋ ಟಿಕೆಟ್ ದರ ಕೂಡ ಹೆಚ್ಚಳವಾದರೆ ಜನರಿಗೆ ಹೆಚ್ಚಿನ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ಪ್ರಯಾಣ ದರ ಏರಿಕೆ ನಿರ್ಧಾರ ಅಂತಿ ಮಗೊಳಿಸುವುದಕ್ಕೂ ಮುನ್ನ ವರದಿ ಸಲ್ಲಿಸುವಂತೆ ಕೇಂದ್ರ ತಂಡ ಸೂಚನೆ ನೀಡಿದೆ. ವರದಿ ಸಲ್ಲಿಕೆಗೆ ಬಿಎಂಆರ್ಸಿಎಲ್ ಸಮಯ ಕೇಳಿದೆ.
ನಮ್ಮ ಮೆಟ್ರೋ ಈ ಹಿಂದೆ 2017 ರಲ್ಲಿ ಪ್ರಯಾಣ ದರ ಹೆಚ್ಚಳ ಮಾಡಿತ್ತು. ಇದೀಗ ಪ್ರಯಾಣ ದರ ಏರಿಕೆಗೆ ಮುಂದಾ ಗಿದ್ದ ಬಿಎಂಆರ್ಸಿಎಲ್ಗೆ ಹಿನ್ನಡೆಯಾಗಿದೆ. ಸದ್ಯ ಬೆಂಗಳೂರು ಮೆಟ್ರೋದಲ್ಲಿ ಟಿಕೆಟ್ಗೆ ಕನಿಷ್ಠ ದರ 10 ರೂ. ಹಾಗೂ ಗರಿಷ್ಠ ದರ 60 ರೂ. ಇದೆ.