ಮಂಗಳವಾರದ ನಂತರ ಲಾಕ್‌ಡೌನ್ ಇಲ್ಲ; ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು; “ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹರಡುತ್ತಿರುವ ಕೊರೋನಾವನ್ನು ತಡೆಯುವ ಸಲುವಾಗಿ ಈಗಾಗಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಮಂಗಳವಾರ ಲಾಕ್‌ಡೌನ್ ಅಂತ್ಯವಾಗಲಿದ್ದು, ಆ ನಂತರ ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಅನ್ನು ಮುಂದುವರೆಸಲಾಗುವುದಿಲ್ಲ” ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಇಂದು ಪತ್ರಕರ್ತರ ಜೊತೆಗೆ ಮಾತನಾಡಿ ಲಾಕ್‌ಡೌನ್ ಮುಂದುವರಿಕೆ ಕುರಿತ ಪ್ರಶ್ನೆಗೆ ಉತ್ತರ ನೀಡಿರುವ ಅವರು, “ಈ ಒಂದು ವಾರಗಳ ಲಾಕ್‌ಡೌನ್ ಸಂದರ್ಭದಲ್ಲಿ ಜನರಿಗೆ ಬೆಳಗ್ಗೆ 12 ಗಂಟೆವರೆಗೆ ತರಕಾರಿ ಹಾಲು ಸೇರಿದಂತೆ ಎಲ್ಲಾ ರೀತಿಯ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶ ನೀಡಿದ್ದೇವೆ. ಲಾಕ್‌ಡೌನ್ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡಿದ ಹಲವಾರು ವಾಹನಗಳನ್ನು ಸೀಜ್‌ ಮಾಡಿದ್ದೇವೆ.

ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಾಧ್ಯವಾದ ಎಲ್ಲಾ ಮಾರ್ಗದಲ್ಲೂ ಪ್ರಯತ್ನ ನಡೆಸುತ್ತಿದೆ. ಆದರೆ, ಯಾವುದೇ ಕಾರಣಕ್ಕೆ ಮಂಗಳವಾರದ ನಂತರ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಮುಂದುವರೆಯುವುದಿಲ್ಲ. ಅಲ್ಲದೆ, ಈ ಕುರಿತು ಸಿಎಂ ಯಡಿಯೂರಪ್ಪ ಸಹ ಸ್ಪಷ್ಟನೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *