Thursday, January 30, 2025
Menu

ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್‌ ಟಾಂಗ್‌

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಅವರು   ಡಿಕೆಶಿಯ ಕಾಲೆಳೆದಿದ್ದಾರೆ.

ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತದೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುವುದೆಂದರೆ ಏನರ್ಥ, ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ, ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದು ಅಶೋಕ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅಶೋಕ್‌ ಅವರು ಡಿಕೆಶಿಯವರನ್ನು ಮುಖ್ಯಮಂತ್ರಿ ಮಾಡುವ ಉತ್ಸುಕತೆಗಿಂತ  ನೆಲ ಕಚ್ಚಿರುವ ಬಿಜೆಪಿಯನ್ನು ಮೊದಲು ರಿಪೇರಿ ಮಾಡಿಕೊಳ್ಳಲು ಆಸಕ್ತಿ ವಹಿಸಲಿ. ಮುಖ್ಯಮಂತ್ರಿ ವಿಚಾರವನ್ನು ಕಾಂಗ್ರೆಸ್‌ ಪಕ್ಷ ನಿಭಾಯಿಸುತ್ತದೆ ಎಂದು ಡಿಕೆಶಿ ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

Related Posts

Leave a Reply

Your email address will not be published. Required fields are marked *