Menu

ಈ ನಂದಿನಿ ಪಾರ್ಲರ್‌ನಲ್ಲಿ ಹಾಲು ಮಾತ್ರವಲ್ಲ ಆಲ್ಕೋಹಾಲ್‌ ಕೂಡ ಮಾರಾಟ

ಕೆಎಂಎಫ್‌ನ ನಂದಿನಿ ಪಾರ್ಲರ್‌ನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಾತ್ರವಲ್ಲದೆ ಮದ್ಯ ಮಾರಾಟವೂ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಹಾಲು ಮಾರುವ ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಮಾಡುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಮೂಲಕ ಈ ವಿಚಾರ ಬಹಿರಂಗಗೊಂಡಿದೆ.

ಹೆಡಿಯಾಲ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ನಂದಿನಿ ಪಾರ್ಲರ್‌ನಲ್ಲಿ ರಹಸ್ಯವಾಗಿ ಮದ್ಯದ ಪ್ಯಾಕೆಟ್‌ಗಳನ್ನ ಗ್ರಾಹಕರಿಗೆ ನೀಡುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮತ್ತು ಸಂಜೆ 7 ರಿಂದ ರಾತ್ರಿ 10 ಗಂಟೆವರೆಗೆ ಇಲ್ಲಿ ಮದ್ಯ ಮಾರಾಟವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *