Menu

ಲಂಚ ಪಡೆದ ಆರೋಪಿತರಿಗೆ 4 ವರ್ಷ ಕಠಿಣ ಶಿಕ್ಷೆ, 10 ಸಾವಿರ ದಂಡ!

lokayukta

ಗದಗ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿಗೆ ವೈದ್ಯಕೀಯ ರಜೆ ಮೇಲಿದ್ದ ಅವಧಿಯಲ್ಲಿನ ವೇತನ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಆರೋಪಿಗಳಾದ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ ಫಕ್ಕೀರಪ್ಪ ಕಲ್ಲಬಂಡಿ ಹಾಗೂ ಕಿರಿಯ ಪುರುಷ ಆರೋಗ್ಯ ಸಹಾಯಕ ವೀರಪ್ಪ ಮಲ್ಲಪ್ಪ ಕುರಿ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ವಿವರ: ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಾಂದಬೀಬಿ ಎಂಬುವವರು 2010ರ ಮಾ. 1ರಿಂದ ಜು. 24ರ ವರೆಗೆ ವೈದ್ಯಕೀಯ ರಜೆ ಪಡೆದಿದ್ದರು. ವೈದ್ಯಕೀಯ ರಜೆ ಅವಧಿಯಲ್ಲಿನ ವೇತನವನ್ನು ಪಾವತಿಸಲು ಹಾಗೂ ಸೇವಾ ಪುಸ್ತಕ ಮತ್ತು ಎಲ್‌ಪಿಸಿಯನ್ನು ವರ್ಗಾವಣೆಯಾದ ಸ್ಥಳಕ್ಕೆ ಕಳುಹಿಸಲು ಆರೋಪಿಗಳಾದ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ ಫಕ್ಕೀರಪ್ಪ ಕಲ್ಲಬಂಡಿ ಹಾಗೂ ಕಿರಿಯ ಪುರುಷ ಆರೋಗ್ಯ ಸಹಾಯಕ ವೀರಪ್ಪ ಮಲ್ಲಪ್ಪ ಕುರಿ ಅವರು ಸತಾಯಿಸಿದ್ದಾರೆ.

ಅಲ್ಲದೇ, ಚಾಂದಬೀಬಿ ಅವರ ಗೈರಯ ಹಾಜರಿಯ ವೇತನ 63,003 ರೂ. ಹಣವನ್ನು ಮಲ್ಲಿಕಾರ್ಜುನ ಫಕ್ಕೀರಪ್ಪ ಕಲ್ಲಬಂಡಿ ಡ್ರಾ ಮಾಡಿಕೊಂಡು, ಅದರಲ್ಲಿ ತಮ್ಮ ಖರ್ಚು ಎಂದು 13,500 ರೂ. ಹಣ ತೆಗೆದುಕೊಂಡು ಉಳಿದ ಹಣವನ್ನು ಪೇ ಬಿಲ್‌ನ್ನು ಕಿರಿಯ ಪುರುಷ ಆರೋಗ್ಯ ಸಹಾಯಕ ವೀರಪ್ಪ ಮಲ್ಲಪ್ಪ ಕುರಿಗೆ ನೀಡಿದ್ದಾನೆ.

ಅ ಹಣದಲ್ಲಿ ವೀರಪ್ಪ ತನ್ನ ಖರ್ಚು ಎಂದು 21,000 ರೂ. ಕಡಿತ ಮಾಡಿಕೊಂಡು ಉಳಿದ ಹಣವನ್ನು ಕೊಡುತ್ತೇನೆ. ಪೇ ಬಿಲ್‌ಗೆ ಸಹಿ ಮಾಡಿ ಎಂದು ತಿಳಿಸಿದ್ದಾನೆ. ಈ ವೇಳೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಚಾಂದಬೀಬಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು.

ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು ವಾದ-ಪ್ರತಿವಾದಗಳನ್ನು ಆಲಿಸಿ ಇಬ್ಬರು ಆರೋಪಿಗಳಿಗೆ ಕಲಂ 7 ಸಹ ಕಲೋ 13(2) ಲಂಚ ಪ್ರತಿಬಂಧ ಕಾಯ್ದೆ 1988ರ ಅನ್ವಯ 4 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ. ವಿಶೇಷ ಸರಕಾರಿ ಅಭಿಯೋಜಕರಾಗಿ ಎಂ.ಎA. ಶಿಗ್ಲಿ ಅವರು ವಾದ ಮಂಡಿಸಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಗದಗ ಜಿಲ್ಲಾ ಪೋಲಿಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *