Menu

ಅಡ್ರೆಸ್ ಕೇಳುವ ನೆಪದಲ್ಲಿ ಸರಗಳ್ಳತನ: ಏಳು ಪ್ರಕರಣದ ಮೂರು ಆರೋಪಿಗಳು ಅರೆಸ್ಟ್‌

ಮಾಗಡಿ ತಾಲೂಕಿನ ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಭು (39), ವಸಂತಿ (37) ಮತ್ತು ಜ್ಯೋತಿ (32) ಬಂಧಿತ ಆರೋಪಿಗಳಾಗಿದ್ದಾರೆ.

ಮಾ.3ರಂದು ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಮೂವರು ಕಾರಿನಲ್ಲಿ ಬಂದು ವಿಳಾಸ ಕೇಳುತ್ತ, ಚೈನ್ ಕದ್ದು ಎಸ್ಕೇಪ್ ಆಗಿದ್ದರು. ಮುನೇಶ್ವರ ಸ್ವಾಮಿ ರಥೋತ್ಸವಕ್ಕೆ ಹೋಗ್ತಿದ್ದ ಭಕ್ತರ ಬಳಿ, ದೇವಾಸ್ಥಾನಕ್ಕೆ ಹೋಗುವ ದಾರಿ ಕೇಳಿ ಅವರ ಸರಗಳನ್ನು ಕದ್ದು ಪರಾರಿಯಾಗಿದ್ದರು.

ಬಂಧಿತರಿಂದ 112 ಗ್ರಾಂ ತೂಕದ ಮೂರು ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಒಂದು ವ್ಯಾಗನರ್ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಗ್ಯಾಂಗ್‌ ಒಟ್ಟು ಏಳು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿತ್ತು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related Posts

Leave a Reply

Your email address will not be published. Required fields are marked *