Menu

ಚನ್ನಪಟ್ಟಣದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಕ್ಯಾಂಟರ್ ಹಾಗೂ ಕಾರು  ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರು ಅಸು ನೀಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವಿಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಕ್ಯಾಂಟರ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಕಳಿಸಿದ್ದಾರೆ.  ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *