ಬಳ್ಳಾರಿಯಲ್ಲಿ ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ಕಾರಿನಲ್ಲಿ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಈ ಅಪಘಾತ ನಡೆದಿದೆ. ಬಳ್ಳಾರಿ ಮತ್ತು ಸಿರುಗುಪ್ಪ ರಸ್ತೆ ಮಧ್ಯೆ ದೇವಿ ನಗರ ಕ್ಯಾಂಪ್ ಹತ್ತಿರ ಅಪಘಾತ ಸಂಭವಿಸಿದೆ.
ಚಾಲಕ ನಿದ್ದೆ ಮಂಪರಿನಲ್ಲಿದ್ದ ಮತ್ತು ಮಂಜು ಕವಿದ ವಾತಾವರಣದಲ್ಲಿ ರಸ್ತೆ ಕಾಣಿಸದೆ ಕಿರು ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ನಿಟ್ಟೂರು ಪ್ರಸಾದ್ ರಾವ್ ಮತ್ತು ಜೊತೆಗಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದದು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿದ್ದಾರೆ.


