Menu

ಬೆಂಗಳೂರಿನ ಮೂವರು ವಿಜಯಪುರ ಕೆರೆಯಲ್ಲಿ ಮುಳುಗಿ ಸಾವು

drown

ಬೆಂಗಳೂರಿನಿಂದ ವಿಜಯಪುರ ಪ್ರವಾಸಕ್ಕೆ ಬಂದಿದ್ದವರಲ್ಲಿ ಮೂವರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಜಯಪುರ ನಗರ ಹೊರವಲಯದ ಭೂತನಾಳ ಕೆರೆಯಲ್ಲಿ ಈ ದುರಂತ ಸಂಭವಿಸಿದೆ.

ಮೃತರನ್ನು ಬೆಂಗಳೂರಿನ ಆರ್.ಟಿ ನಗರದ ಬಾಲಕ ಮಹಮ್ಮದ್ ಹಯಾತ್, ಅಬ್ದುಲ್ ಖುದ್ದುಸ್ ಹಾಗೂ ಹೈದರ್ ಪಾಶಾ ಎಂದು ಗುರುತಿಸಲಾಗಿದೆ. 14 ಜನ ಕುಟುಂಬಸ್ಥರು ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿದ್ದರು. ಈ ವೇಳೆ ಭೂತನಾಳ ಕೆರೆ ವೀಕ್ಷಣೆಗೆ ಹೋಗಿದ್ದು, ಬಾಲಕ ನೀರಿಗೆ ಇಳಿದು ಆಟವಾಡುವಾಗ ಮುಳುಗಿದ್ದಾನೆ. ಬಾಲಕನ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಇಳಿದಾಗ ಅವರು ಮುಳುಗಿ ಅಸು ನೀಗಿದ್ದಾರೆ.

ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಆದರ್ಶ ನಗರ ಪೊಲೀಸರು ಶವಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Posts

Leave a Reply

Your email address will not be published. Required fields are marked *