Tuesday, November 25, 2025
Menu

ಕಲಬುರಗಿಯಲ್ಲಿ ಭೀಕರ ಅಪಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

mahantesh bilagi

ಕಲಬುರಗಿ: ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರ ಜೊತೆ ಅವರ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಮಂಗಳವಾರ ಮಧ್ಯಾಹ್ನ ದುರ್ಘಟನೆ ಸಂಭವಿಸಿದೆ. ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕೆಎ 04, ಎನ್ ಸಿ 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ

ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಕಳೆದ 1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

Related Posts

Leave a Reply

Your email address will not be published. Required fields are marked *