ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದ ಈ ಮೂವರು ರಾತ್ರಿ ಬಿರಿಯಾನಿ ತಿನ್ನಲು ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಮಾಗಡಿ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಮೂವರೂ ಸ್ಥಳದಲ್ಲೇ ಅಸು ನೀಗಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನಾನಕ್ಕೆಂದು ನದಿಗಿಳಿದ ನಾಲ್ವರ ಸಾವು
ಆಂಧ್ರಪ್ರದೇಶ ಕರ್ನಾಟಕ ಗಡಿ ಭಾಗದ ರಾಜೊಳ್ಳಿಬಂಡಾ ಆಣೆಕಟ್ಟಿನ ಕೊನೆ ಭಾಗದ ಬಳಿ ಸ್ನಾನಕ್ಕೆಂದು ನದಿಗಳಿದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ದಾಸರಿ ಉಮಾವತಿ , ದಾಸರಿ ರತ್ನಮ್ಮ , ಮಹೇಶ , ಶಿವಾನಂದ ಮೃತ ಪಟ್ಟವರು.
ಸಂಬಂಧಿಕರ ಮದುವೆಗೆ ತೆರಳಿದ್ದ ಇವರು ಮಧ್ಯಾಹ್ನ ಸ್ನಾನಕ್ಕೆ ನದಿಗೆ ಇಳಿದಿದ್ದರು. ಆಂಧ್ರದ ಕರ್ನೂಲು ಜಿಲ್ಲೆಯ ಕೊಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ, ಸ್ಥಳೀಯ ಮೀನುಗಾರರ ಸಹಾಯದಿಂದ ಶವಗಳನ್ನು ಹೊರತೆಗೆಯಲಾಗಿದೆ.


