Menu

ಪುಲ್ವಾಮದಲ್ಲಿ ಭದ್ರತಾ ಪಡೆಯಿಂದ ಮೂವರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್‌ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ನಾಡರ್‌ ಮತ್ತು ಟ್ರಾಲ್‌ ಪ್ರದೇಶಗಳಲ್ಲಿ ಗುರುವಾರ ಬೆಳಗ್ಗೆ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಚಕಮಕಿಯಲ್ಲಿ ಮೂವರು ಉಗ್ರರನ್ನು ಸೇನೆ ಹೊಡದುರುಳಿಸಿದೆ.
ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್‌ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದವರು ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ಶೋಪಿಯಾನ್ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಸಂಘರ್ಷದಲ್ಲಿ ಭಯೋತ್ಪಾದಕ ಕಮಾಂಡರ್ ಶಾಹಿದ್ ಕುಟ್ಟಯ್, ಹರಿಸ್ ನಜೀರ್, ಅದ್ನಾನ್ ಶಫಿ ಎಂಬ ಮೂವರು ಉಗ್ರರನ್ನು ಭದ್ರತಾಪಡೆ ಕೊಂದಿದೆ. ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ನಡೆದಿದೆ.

Related Posts

Leave a Reply

Your email address will not be published. Required fields are marked *