Menu

ಹಾಸನ, ಮಂಡ್ಯ, ತುಮಕೂರುಗಳಲ್ಲಿ ಸುರಿಯಲಿದೆ ಸಿಡಿಲಿನೊಂದಿಗೆ ಬಿರುಗಾಳಿ ಮಳೆ

ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದು ಅಂದರೆ ಶನಿವಾರ ಮೇ ೨೩  ಕತ್ತಲಾಗುವಷು ಹೊತ್ತಿಗೆ ಗುಡುಗು, ಸಿಡಿಲು,ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಾತಾವರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ, ಬಿರುಗಾಳಿ ಜೊತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸೋಮಾಲಿಯ ಜೆಟ್ ಸ್ಟ್ರೀಮ್ ಪ್ರಭಾವದಿಂದಾಗಿ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ. ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ  ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಮೇ 29ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಾಳೆ ಅಂದರೆ ಭಾನುವಾರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ , ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ನೈಋತ್ಯ ಮಾನ್ಸೂನ್ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಬಂಗಾಳಕೊಲ್ಲಿಯ ಭಾಗಗಳಿಗೆತಲುಪಿದೆ. ಮೇ 26ಕ್ಕೆ ಕೇರಳ ಕರಾವಳಿಗೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮಳೆ, ಗಾಳಿ ಮತ್ತು ಗುಡುಗು ಎಚ್ಚರಿಕೆ ನೀಡಲಾಗಿದೆ. ಮೇ 28 ರಿಂದ ಜೂನ್ 3 ರವರೆಗೆ ಕೇರಳದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

Related Posts

Leave a Reply

Your email address will not be published. Required fields are marked *