ರಾಜ್ಯದಲ್ಲಿ ಕೊರೊನಾ ಅಬ್ಬರ: ಇಂದು ಒಂದೇ ದಿನ 918 ಮಂದಿಗೆ ಪಾಸಿಟಿವ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 918 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11923 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 371 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 7,287 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

4441 ಸಕ್ರಿಯ ಪ್ರಕರಣಗಳು ಇದ್ದು 197 ಮಂದಿ ಐಸಿಯುನಲ್ಲಿ ಇದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 11 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 191 ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *