ನಮ್ಮ ಮೆಟ್ರೋ ನೇರಳೆ ಮಾರ್ಗದ ಹಲಸೂರು ಮತ್ತು ಟ್ರಿನಿಟಿ ನಿಲ್ದಾಣಗಳ ನಡುವೆ ಜೂ.22ರ ಭಾನುವಾರ ನಿಗದಿತ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾ ಗುತ್ತಿದ್ದು, ಎಂ.ಜಿ. ರಸ್ತೆ – ಬೈಯ್ಯಪ್ಪನಹಳ್ಳಿ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಜೂನ್ 22 ಭಾನುವಾರ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಎಂ.ಜಿ. ರಸ್ತೆ – ಬೈಯ್ಯಪ್ಪನಹಳ್ಳಿ ಮಾರ್ಗದ ನಡುವಿನ ಹಾಲಸೂರು ಹಾಗೂ ಟ್ರಿನಿಟಿ ಮೆಟ್ರೋ ನಿಲ್ದಾಣಗಳ ಮಧ್ಯೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಪ್ರಯಾಣಿಕರು ದಿನಚರಿ ಪ್ರವಾಸದ ಯೋಜನೆಯನ್ನು ಮುಂಚಿತವಾಗಿ ರೂಪಿಸಿಕೊಳ್ಳಬೇಕು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.