ನಮ್ಮ ಮೆಟ್ರೊ’ದ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಭಾನುವಾರ ಅಂದರೆ 2026ರ ಮೇ 10ರಂದು ಕೆಲವು ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಭಾನುವಾರ ಬೆಳಿಗ್ಗೆ 07ರಿಂದ 09 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ ನಡುವೆ ತುರ್ತು ಮತ್ತು ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಸುಗಮ ಸಂಚಾರಕ್ಕಾಗಿ ಇದು ಅನಿವಾರ್ಯ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಚಲ್ಲಘಟ್ಟ – ವಿಜಯನಗರಲ್ದಾಣಗಳ ನಡುವೆ ರೈಲುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಎಂ.ಜಿ. ರಸ್ತೆ – ವೈಟ್‌ಫೀಲ್ಡ್ (ಕಾಡುಗೋಡಿ) ಭಾಗದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್ ವರೆಗಿನ ಹಸಿರು ಮಾರ್ಗದ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹಳದಿ ಮಾರ್ಗ ಆರ್.ವಿ. ರಸ್ತೆ – ಬೊಮ್ಮಸಂದ್ರ ನಡುವೆ ರೈಲುಗಳು ಎಂದಿನಂತೆ ಸಂಚರಿಸಲಿವೆ. ಒಂಬತ್ತು ಗಂಟೆ ನಂತರ ಸುಗಮ ಸಂಚಾರ ಆರಂಭ ಆಗಲಿದೆ.
ನಮ್ಮ ಮೆಟ್ರೋ ‘ಪಿಂಕ್ ಲೈನ್’ ಜೂನ್‌ನಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ. ಕಾಳೇನ ಅಗ್ರಹಾರದಿಂದ ನಾಗವಾರ ಮಾರ್ಗದ ಮೊದಲ ಹಂತದ ಉದ್ಘಾಟನೆಗೆ ಸಿದ್ಧತೆ ನಡೆದಿದ್ದು, ಜೂನ್ ತಿಂಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಪಿಂಕ್ ಲೈನ್‌ಗಾಗಿ ಈಗಾಗಲೇ ಆರು ರೈಲುಗಳು ಬೆಂಗಳೂರಿಗೆ ಆಗಮಿಸಿದ್ದು, ಮೇ ಮೊದಲ ವಾರದಲ್ಲಿ ಆರನೇ ರೈಲು ಕೂಡ ಲಗ್ಗೆ ಇಡಲಿದೆ. ಈ 6 ಈ ರೈಲುಗಳ ಪರೀಕ್ಷೆ ಮುಗಿಯುತ್ತಿದ್ದಂತೆ ಸಂಚಾರ ಆರಂಭವಾಗಲಿದೆ.


