ಕರ್ನಾಟಕ ಸರ್ಕಾರವು ಐದು ಅಧಿಕಾರಿಗಳ ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಅಧಿಕಾರಿಗಳ ಮನವಿ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.
ಸಿಎಂ ಡಿಕೆ ಶಿವಕುಮಾರ್ ಜಾರಿಗೊಳಿಸಿರುವ ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ನೀಡಲಾಗಿದೆ. ಆರ್. ರಾಗಪ್ರಿಯ ಅವರನ್ನು ಕಾರ್ಮಿಕ ಇಲಾಖೆಯ ಆಯಕ್ತರನ್ನಾಗಿ ನೇಮಿಸಲಾಗಿದೆ.
ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಡಾ. ಗೋಪಾಲ ಕೃಷ್ಣ ಅವರನ್ನು ಕಾಲೇಜು ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಎನ್. ಮಂಜುಶ್ರೀ ಅವರಿಗೆ ಹುದ್ದೆ ನೀಡಿಲ್ಲ.


