Menu

ಹೈಕೋರ್ಟ್ ಛೀಮಾರಿ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಛೀಮಾರಿ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರವನ್ನು ಕೆಎಸ್‌ಆರ್‌ಟಿಸಿ (KSRTC) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಂದೂಡಿರುವುದಾಗಿ ಘೋಷಿಸಿದೆ.

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು, ನ್ಯಾಯಮೂರ್ತಿ ಸಿ.ಎಂ ಜೋಷಿ ನೇತೃತ್ವದ ಹೈಕೋರ್ಟ್ ದ್ವಿಸದಸ್ಯ ಪೀಠ ಮುಷ್ಕರ ಮುಂದೂಡುವಂತೆ ಸೂಚಿಸಿದ್ದರೂ ಅದನ್ನು ಪಾಲಿಸದ ಕಾರ್ಮಿಕ ಸಂಘಟನೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

ಸರ್ಕಾರಿ ಪರ ವಕೀಲರಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ನಿನ್ನೆ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಂಘಟನೆಯೊಂದಿಗೆ ಸಭೆ ಮಾಡಲಾಗಿದೆ. ನಿನ್ನೆ ರಾತ್ರಿಯಷ್ಟೇ ನೋಟಿಸ್ ಸಿಕ್ಕಿದೆ. ರಾಜಿ ಸಂಧಾನಕ್ಕೆ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮಾತುಕತೆ ಏನಾಗಿದೆ? ಎಂದು ಹೈಕೋರ್ಟ್ ಪ್ರಶ್ನೆಗೆ ಈವೆರೆಗೆ ಸರ್ಕಾರ ನಡೆಸಿದ ಮಾತುಕತೆಗಳ ವಿವರ ನೀಡಿದರು. ಅಲ್ಲದೇ ಇಂಡಸ್ಟ್ರಿಯಲ್ ಡಿಸ್ಪ್ಯೂಟ್ ಕಾಯ್ದೆಯಂತೆ ಸಂಧಾನ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಬಳಿಕ ಸಾರಿಗೆ ಸಂಘಟನೆಗಳ ಪರ ವಕೀಲರನ್ನ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತು. ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ.ಜೋಷಿ ನೇತೃತ್ವದ ಪೀಠ ನ್ಯಾಯಾಂಗ ನಿಂದನೆಯ ಎಚ್ಚರಿಕೆಯನ್ನೂ ನೀಡಿತು.

ನ್ಯಾಯಾಲಯದ ಆದೇಶದ ಬೆನ್ನಲ್ಲೇ ಕಾರ್ಮಿಕ ಸಂಘಟನೆಗಳ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮುಷ್ಕರವನ್ನು ಮುಂದೂಡಿರುವುದಾಗಿ ಘೋಷಿಸಿದರು. ಅಲ್ಲದೇ ಸರ್ಕಾರ ತಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಮಾತನಾಡಿ, ಮುಷ್ಕರವನ್ನಜು ತಾತ್ಕಾಲಿಕವಾಗಿ ಮುಂದೂಡಿದ್ದೇವೆ. ಮುಖ್ಯಮಂತ್ರಿಗಳು ಸಭೆ ಕರೆದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.

 

Related Posts

Leave a Reply

Your email address will not be published. Required fields are marked *