Menu

ಅ.15 ರಿಂದ ಮತ್ತೆ ಸಾರಿಗೆ ನೌಕರರ ಮುಷ್ಕರ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಅಕ್ಟೋಬರ್ 15 ರಿಂದ 19 ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಆಗಸ್ಟ್‌- 5 ರಂದು ನಾಲ್ಕು ನಿಗಮದ ನೌಕರರು ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದರು. ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ವಾಪಸ್ ಪಡೆದಿದ್ದರು. ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲದ ಕಾರಣ ಮತ್ತೆ ಮುಷ್ಕರ ಮಾಡಲು ಸಿದ್ಧತೆ ನಡೆದಿದೆ.

38 ತಿಂಗಳ ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ. 15 ರಿಂದ ಐದು ದಿನ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ. ಅ. 15ರಿಂದ 19ರವರೆಗೆ ಬೆಂಗಳೂರು, ಹುಬ್ಬಳ್ಳಿ ಹಾಗೂ ಕಲಬುರಗಿ ನಗರಗಳಲ್ಲಿ ಐದು ದಿನ ನಾಲ್ಕು ಸಾರಿಗೆ ನಿಗಮಗಳ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಆ. 5ರಂದು ಆರಂಭಿಸಿದ್ದ ಮುಷ್ಕರವನ್ನು ಹೈಕೋರ್ಟ್ ಆದೇಶದ ಮೇರೆಗೆ  ವಾಪಸ್‌ ಪಡೆಯಲಾಗಿತ್ತು, ಸರಕಾರ ಬೇಡಿಕೆಗಳ ಕುರಿತು ಮಾತುಕತೆ ಮುಂದುವರಿಸುವುದಾಗಿ ಹೈಕೋರ್ಟ್‌ಗೆ ತಿಳಿಸಿತ್ತು. ಜಂಟಿ ಕ್ರಿಯಾ ಸಮಿತಿಯು ಆಗಸ್ಟ್ 11 ಮತ್ತು ಸೆ. 15ರಂದು ರಾಜ್ಯ ಸರಕಾರಕ್ಕೆ ಪತ್ರ ಬರೆದು ಶೀಘ್ರ ಸಭೆ ಕರೆದು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿತ್ತು. ಸರಕಾರ ಈವರೆಗೂ ಮಾತುಕತೆ ಆರಂಭಿಸದೆ ಕಾರ್ಮಿಕ ವಿರೋಧಿ ಧೋರಣೆ ತಾಳಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್‌.ವಿ. ಅನಂತ ಸುಬ್ಬರಾವ್‌ ಆರೋಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *