ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಫೋಕ್ಸೊ ಪ್ರಕರಣದ ವಿಚಾರಣೆಗಾಗಿ ಖುದ್ದು ಹಾಜರಾತಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಬಾಲಕಿ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪದಡಿ ಫೋಕ್ಸೊ ಕಾಯ್ದೆಯಡಿ ಬಿಎಸ್ ಯಡಿಯೂರಪ್ಪ ಹಾಗೂ ನಾಲ್ವರ ವಿಚಾರಣೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಬೆಂಗಳೂರು ಸೆಷನ್ಸ್ ನ್ಯಾಯಾಲಯ ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಈ ಪ್ರಕರಣ ಸಂಬಂಧ ಹೈಕೋರ್ಟ್ ಟ್ರಯಲ್‌ಗೆ ಅನುಮತಿ ನೀಡಿತ್ತು. ಇದೀಗ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದು, ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ತಿಳಿಸಿದೆ.

ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಯಡಿಯೂರಪ್ಪನವರ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿತ್ತು.