ಉತ್ತರಪ್ರದೇಶದ ಬುಲಂದ್‌ಶಹರ್ ರಾಷ್ಟ್ರೀಯ ಹೆದ್ದಾರಿ 34 ರಲ್ಲಿ ಬೆಳಗಿನ ಜಾವ ಭಕ್ತರಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದು ಎಂಟು ಮಂದಿ ಮೃತಪಟ್ಟು, 45 ಜನ ಗಾಯಗೊಂಡಿದ್ದಾರೆ. ಬೆಳಗಿನ ಜಾವ ದುರಂತ ಸಂಭವಿಸಿದ್ದು, 60-61 ಜನರು ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಉತ್ತರ ಪ್ರದೇಶದ ಕಾಸ್ಗಂಜ್‌ನಿಂದ ಗೋಗಾಜಿ ಭಕ್ತರು ರಾಜಸ್ಥಾನದ ಗೋಗಮೇಡಿಗೆ ಹೋಗುತ್ತಿದ್ದಾಗ ಬುಲಂದ್‌ಶಹರ್-ಅಲಿಗಢ ಗಡಿಯ ಅರ್ನಿಯಾ ಬೈಪಾಸ್ ಘಾಟಲ್ ಗ್ರಾಮದ ಬಳಿ ಈ ದುರಂತ ನಡೆದಿದೆ. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಟ್ರಾಲಿ ಉರುಳಿದೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್‌ಎಸ್‌ಪಿ ಸೇರಿದಂತೆ ಪೊಲೀಸ್ ತಂಡಗಳು ಅಪಘಾತ ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ.
ಪಾಟ್ನಾದಲ್ಲಿ ಶನಿವಾರ ಮಿನಿ ವ್ಯಾನ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಐವರು ಮಹಿಳೆಯರು ಸೇರಿದಂತೆ ಎಂಟು ಜನ ಪ್ರಾಣ ಕಳೆದುಕೊಂಡಿದ್ದರು. ಪಾಟ್ನಾ-ನಳಂದ ಗಡಿಯ ಬಳಿಯ ಶಹಜಹಾನ್‌ಪುರದಲ್ಲಿ ಬೆಳಗಿನ ಜಾವ ಈ ಅಪಘಾತ ಸಂಭವಿಸಿತ್ತು. ಮೃತರೆಲ್ಲರೂ ನಳಂದ ಜಿಲ್ಲೆಯ ಮಾಲವನ್ ಗ್ರಾಮದ ಒಂದೇ ಕುಟುಂಬದವರಾಗಿದ್ದು, ಗಂಗಾ ಸ್ನಾನ ಮಾಡಲು ಫತುಹಾಗೆ ಹೋಗುತ್ತಿದ್ದರು ಎನ್ನಲಾಗಿದೆ.