Menu

ದಯಾಮರಣ ಕೋರಿದ್ದ ತುಮಕೂರಿನ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ

ಈ ಹಿಂದೆ ಗೃಹಸಚಿವರಾಗಿದ್ದ ಪರಮೇಶ್ವರ್‌ ಅವರಲ್ಲಿ ದಯಾಮರಣ ಕೋರಿ ಮನವಿ ಸಲ್ಲಿಸಿದ್ದ   ತುಮಕೂರಿನ ಶಿರಾ ನಗರ ಹೊರ ವಲಯದ  ಮಹಿಳೆಯು ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಬಿಯಾ ಪಾಷಾ (39), ಮಗಳು ತಮನ್ನಾ (9), ಮಗ ಸಿಮ್ರಾನ್ (5) ಆತ್ಮಹತ್ಯೆ ಮಾಡಿಕೊಂಡವರು. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್ಪಿ ಅಶೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2025ರಲ್ಲಿ ತುಮಕೂರಿನಲ್ಲಿ ನಡೆದ ಸರ್ಕಾರದ ಸವಲತ್ತು ವಿತರಣೆ ಹಾಗೂಧ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಂದಿದ್ದ ಅಂದಿನ ಸಿಎಂ ಸಿದ್ದರಾಮಯ್ಯ ಅವರ ಬಳಿ ರಾಬಿಯಾ ತನ್ನ ಮನವಿ ಆಲಿಸುವಂತೆ ಹೋರಾಟ ನಡೆಸಿದ್ದರು.

ರಾಬಿಯಾ ಮನವಿಗೆ ಸ್ಪಂದಿಸಿ ಸಿಎಂ ಸಿದ್ದರಾಮಯ್ಯ 20/30 ನಿವೇಶನ ಮಂಜೂರು ಮಾಡಿದ್ದರು. ಸಿಎಂ ಆದೇಶ ನೀಡಿ ಒಂದೂವರೆ ವರ್ಷ ಕಳೆದಿದ್ದರೂ ನಿವೇಶನ ನೀಡದೆ ಅಧಿಕಾರಿಗಳು ಸತಾಯಿಸಿದ್ದರು. ರೋಸಿ ಹೋದ
ಆಕೆ ಆಗಿನ ಗೃಹಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಜನಸ್ಪಂದನ ಸಭೆಯಲ್ಲೂ ಗಲಾಟೆ ಮಾಡಿದ್ದರು. ಸಿಎಂ ಆದೇಶ ಮಾಡಿದ್ದರೂ ನನಗೆ ನಿವೇಶನ ಕೊಟ್ಟಿಲ್ಲ, ನನಗೆ ದಯಾಮರಣ ನೀಡಿ ಎಂದು
ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದರು.

ಸಮಸ್ಯೆ ಆಲಿಸಿದ್ದ ಅಂದಿನ ಗೃಹಸಚಿವ ಡಾ.ಜಿ ಪರಮೇಶ್ವರ್ ಶಿರಾ ನಗರದ ಹೊರವಲಯದಲ್ಲಿ ಸರ್ಕಾರದಿಂದ ಒಂದು ನೀವೇಶನ ನೀಡಿದ್ದರು. ಸರ್ಕಾರ ಜಾಗ ಕೊಟ್ಟು ಮನೆ ಕಟ್ಟಿಸಿ ಕೊಡುತ್ತಿದ್ದರೂ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *