ಯಡಿಯೂರಪ್ಪ ಪರ ತುಮಕೂರು ಸಿದ್ಧಗಂಗಾಮಠ

ಬೆಂಗಳೂರು,ಜು.21 ಸಿಎಂ ಬದಲಾವಣೆ ಸುದ್ದಿ ಹಬ್ಬುತ್ತಿದ್ದಂತೆಯೇ ಯಡಿಯೂರಪ್ಪ ಪರ ಮಠಾಧೀಶರು,ಸ್ವಾಮೀಜಿಗಳ ವಕಾಲತ್ತು ರಾಜಕಾರಣ ಮುಂದುವರೆದಿದ್ದು,ತುಮಕೂರು ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮೀಜಿ ಕೆಲ ಮಠಾಧೀಶರ ಜೊತೆ ಯಡಿಯೂರಪ್ಪರನ್ನು ಬುಧವಾರ ಭೇಟಿಯಾಗಿ ರಾಜ್ಯರಾಜಕಾರಣ ಜಾತಿರಾಜಕಾರಣ ಕುರಿತು ಚರ್ಚಿಸಿದರು.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದಲಿಂಗಸ್ವಾಮೀಜಿ,
ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ. ಸಿಎಂ ಯಡಿಯೂರಪ್ಪ ನಮ್ಮ ಜತೆ ಚರ್ಚಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ 75 ವರ್ಷ ಮೀರಿದ ಯಾವುದೇ ವ್ಯಕ್ತಿಗೆ ಅಧಿಕಾರ ನೀಡಿಲ್ಲ. ಇಡೀ ದೇಶದಲ್ಲಿ ನನಗೆ ಮಾತ್ರ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನಮ್ಮ ಇಚ್ಚೆ ಏನೆಂದರೆ ಅವಧಿ ಪೂರೈಸುವವರೆಗೆ ಯಡಿಯೂರಪ್ಪ ಮುಂದುವರೆಸಬೇಕೆಂಬುದಷ್ಟೇ ನಮ್ಮ ಆಶಯವಾಗಿದೆ ಎಂದು ಆಗ್ರಹಿಸಿದರು.

,

Leave a Reply

Your email address will not be published. Required fields are marked *