Saturday, September 06, 2025
Menu

ಕಾವೇರಿ ಪಾಲಾದ ಬೆಂಗಳೂರಿನ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು!

mandya

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ಸಂಭವಿಸಿದೆ.

ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಗಳಾದ ವಿಲಿಯಂ ಸ್ಯಾಮ್ (21), ವೆಂಕಟೇಶ್ (21) ಮೃತ ದುರ್ದೈವಿಗಳು. ಇಬ್ಬರು ಅಂತಿಮ ವರ್ಷದ ಬಿಬಿಎಂ ವ್ಯಾಸಂಗ ಮಾಡುತ್ತಿದ್ದರು. ಬೆಂಗಳೂರಿನಿಂದ 7 ಮಂದಿ ಪ್ರವಾಸಕ್ಕೆಂದು ಶ್ರೀರಂಗಪಟ್ಟಣಕ್ಕೆ ಬಂದಿದ್ದರು.

ಎಡಮುರಿ ಬಳಿ ಈಜಲು ಹೋಗಿದ್ದಾಗ ಆಯತಪ್ಪಿ ಬಿದ್ದ ಪರಿಣಾಮ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ ಸ್ನೇಹಿತರು ಕೂಡಲೇ ಕೆ.ಆರ್.ಎಸ್. ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಶ್ರೀರಂಗಪಟ್ಟಣ ಅಗ್ನಿಶಾಮಕ ಸಿಬ್ಬಂದಿಗಳು ಮೃತ ಇಬ್ಬರು ವಿದ್ಯಾರ್ಥಿಗಳ ಶವ ಹೊರ ತೆಗೆದಿದ್ದಾರೆ.

ಕೆ.ಆರ್.ಎಸ್. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹಗಳನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *