ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ.
ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಗಾಯಗೊಂಡು ಸ್ಥಿತಿ ಚಿಂತಾಜನಕವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿಯ ನಾಗರಾಜ್ ಕುಟುಂಬ ಬಾಡಿಗೆಗೆ ಇದ್ದ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ.
ಬೆಂಕಿ ಹೊತ್ತಿಕೊಂಡಾಗ ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ ಮಾಲೀಕ ಶಿವಶಂಕರ್ ಬೆಂಕಿ ಹಾರಿಸಲು ಮುಂದಾಗಿದ್ದರು. ಅಭಿಷೇಕ್ನನ್ನು ಉಳಿಸಲು ಶ್ರೀನಿವಾಸ್ ಹೋಗಿದ್ದು ಮೃತಪಟ್ಟಿದ್ದರೆ, ನಾಗರಾಜ್ರನ್ನು ಉಳಿಸಲು ಹೋಗಿದ್ದ ಶಿವಶಂಕರ್ಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳೀಯರು ಬೆಂಕಿ ತಗುಲಿದವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.