Menu

ಮಹಾರಾಷ್ಟ್ರದಲ್ಲಿ 2 ಎಚ್ ಎಂವಿಪಿ ಪ್ರಕರಣ ಪತ್ತೆ: 7ಕ್ಕೇರಿದ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್ ಎಂವಿಪಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿದೆ.

ಜನವರಿ 3ರಂದು ಶೀತ ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದ ರಾಮ್ ದಾಸ್ ಪೇಟ್ ಬಡಾವಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ತಪಾಸಣೆ ವೇಳೆ ಎಚ್ ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ.

ಕೋವಿಡ್ ಮಾದರಿಯ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ ತಪಾಸಣೆಗೆ ಮಾದರಿ ಕಳುಹಿಸಿಕೊಟ್ಟಿದ್ದರು. ಅಲ್ಲದೇ ಶೀತ, ಕಫ, ಗಂಟಲು ನೋವು ಹಾಗೂ ಜ್ವರ ಇದ್ದಿದ್ದರಿಂದ ಈ ನಿರ್ಧಾರ ಮಾಡಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಎಚ್ ಎಂವಿಪಿ ವೈರಸ್ ದೃಢಪಟ್ಟಿದೆ.

ದೇಶದಲ್ಲಿ ಎಚ್ ಎಂವಿಪಿ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳ ಸಭೆ ಕರೆದಿದ್ದು, ಸಭೆಯಲ್ಲಿ ತಜ್ಞರ ಮಾಹಿತಿ ಕುರಿತು ಚರ್ಚೆ ನಡೆಯಲಿದೆ.

Related Posts

Leave a Reply

Your email address will not be published. Required fields are marked *