Menu

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು

delhi building

ನವದೆಹಲಿ: ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಸಂಭವಿಸಿದೆ.

9 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ. ರಕ್ಷಿಸಲ್ಪಟ್ಟ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಸುಮಾರು 7 ಗಂಟೆಗೆ ಕಟ್ಟಡ ಕುಸಿದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಅನೇಕರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಏಳು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಈ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸ್ಥಳೀಯರು ಮುಂಜಾನೆ ವಾಕ್​ಗಾಗಿ ಹೋಗುತ್ತಿದ್ದ ಸಂದರ್ಭದಲ್ಲೇ ಕಟ್ಟಡ ಕುಸಿದಿದೆ. ತಕ್ಷಣ ಸ್ಥಳದಲ್ಲಿದ್ದ ಜನರು ಪೊಲೀಸರು ಮತ್ತು ಅಗ್ನಿಶಾಮಕ ವಾಹನ ಆಗಮನಕ್ಕೂ ಮುನ್ನವೇ ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆಗೆ ಮುಂದಾದರು. ಬಳಿಕ ರಕ್ಷಣಾ ತಂಡಗಳು ಕೂಡ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿವೆ.

Related Posts

Leave a Reply

Your email address will not be published. Required fields are marked *