Wednesday, August 19, 2026
Menu

ಕೆಪಿಎಸ್ಸಿಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ

KPSC

ಕೆಪಿಎಸ್ಸಿ ಪರೀಕ್ಷೆ ಮತ್ತು ನೇಮಕ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಉದ್ಯೋಗ ಆಕಾಂಕ್ಷಿಗಳು ಆಗ್ರಹಿಸುತ್ತಿರುವ ಮಧ್ಯೆಯೇ ಸರ್ಕಾರವು ಕೆಪಿಎಸ್ಸಿಗೆ ಇಬ್ಬರು ಐಎಎಸ್‌ ಅಧಿಕಾರಿಗಳ ನೇಮಕ ಮಾಡಿದೆ.

ಆಯೋಗದ ಪ್ರಮುಖ ಅಧಿಕಾರಿಗಳ ವರ್ಗಾವಣೆಗೂ ಸರ್ಕಾರ ಆದೇಶ ನೀಡಿದೆ. ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ದಿಗ್ವಿಜಯ್ ಬೋಡ್ಕೆ ಅವರನ್ನು ಯಾವುದೇ ಪರ್ಯಾಯ ಹುದ್ದೆ ನೀಡದೆ ವರ್ಗಾವಣೆ ಮಾಡಲಾಗಿದೆ. ಇದರಿಂದ ತೆರವಾಗಿರುವ ಪರೀಕ್ಷಾ ನಿಯಂತ್ರಕ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಹೆಚ್. ಪ್ರಸನ್ನ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರ ಹುದ್ದೆಗೂ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಲವೀಶ್ ಓರ್ಡಿಯಾ ಅವರನ್ನು ಕೆಪಿಎಸ್‌ಸಿ ಜಂಟಿ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಆದೇಶದಂತೆ ಲವೀಶ್ ಓರ್ಡಿಯಾ ತಕ್ಷಣದಿಂದಲೇ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಕೆಪಿಎಸ್‌ಸಿಯ ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪಗಳು ಕೇಳಿಬಂದದ ಬಳಿಕ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪರೀಕ್ಷೆಗಳನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ದೊರೆಯಬೇಕು ಎಂಬ ಆಗ್ರಹ ತೀವ್ರಗೊಂಡಿತ್ತು.

Related Posts

Leave a Reply

Your email address will not be published. Required fields are marked *