Menu

ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ: ಕಾರವಾರದಲ್ಲಿ ಇಬ್ಬರ ಸಾವು

ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಗಂಭೀರ ಗಾಯಗೊಂಡ ಘಟನೆ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ.

ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತಪಟ್ಟವರು. ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಜಾರ್ಖಂಡ್‌ ಯುವಕ

ಬೆಂಗಳೂರಿನ ಕುಂಬಳಗೋಡು ಪ್ರದೇಶದಲ್ಲಿ ಜಾರ್ಖಂಡ್‌ನ ಯುವಕನೊಬ್ಬ ಲಾರಿ ಅಡಿಗೆ ಸಿಲುಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದೃಶ್ಯ ಸಿಸಿಟಿಯಲ್ಲಿ ದಾಖಲಾಗಿದೆ. ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಜಾರ್ಖಂಡ್‌ನ ರಾಜು ಪಹರಿಯಾ ಎಂಬ ಯುವಕ ಲಾರಿ ಬರುತ್ತಿರುವುದನ್ನು ಕಂಡು ಓಡಿ ಹೋಗಿ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ರಾಜು ಪಹರಿಯಾ ಎರಡೇ ದಿನಗಳಲ್ಲಿ ಹೀಗೆ ಮಾಡಿಕೊಂಡಿದ್ದಾನೆ. ವೈಯಕ್ತಿಕ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Related Posts

Leave a Reply

Your email address will not be published. Required fields are marked *