Menu

ಬೈಕ್‌ಗೆ ಲಾರಿ ಡಿಕ್ಕಿ: ಇಬ್ಬರ ಸಾವು

ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನಕ್ಕೆ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಮಹಿಳೆ, ಪುರುಷ ಮೃತಪಟ್ಟಿದ್ದು, ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದಿಂದ ಕೊಟ್ಟಿಯೂರಿಗೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ ೨೦ ಮಂದಿಗೆ ಗಾಯ

ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ಕೊಟ್ಟಿಯೂರಿಗೆ ತೆರಳುತ್ತಿದ್ದ ಕರ್ನಾಟಕದ ಪ್ರವಾಸಿಗರ ಟೆಂಪೊ ಟ್ರಾವೆಲರ್ ವಾಹನದು ನಿಯಂತ್ರಣ ತಪ್ಪಿ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಯನಾಡ್ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆದ ತಕ್ಷಣ ಸ್ಥಳೀಯರು ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್‌ಗೆ ಮಾಹಿತಿ ನೀಡಿದರು. ಕಣ್ಣೂರು ಜಿಲ್ಲೆಯ ಗಡಿ ಭಾಗದ ಸಮೀಪವಿರುವ ಆಂಬಾಯತ್ತೋಡ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೊ ಪಲ್ಟಿಯಾಗಿದೆ. ವಾಹನವು ಜಖಂಗೊಂಡಿದ್ದು ಸ್ಥಳೀಯ ನಿವಾಸಿಗಳು ಹಾಗೂ ಹಾದಿಹೋಕರು ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡರು.

ಗಾಯಗೊಂಡ 20 ಮಂದಿಯನ್ನು ರಕ್ಷಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರು ಕರ್ನಾಟಕದ ಯಾವ ಜಿಲ್ಲೆಯವರು ಎಂಬ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

Related Posts

Leave a Reply

Your email address will not be published. Required fields are marked *