ಕೋಲಾರದಲ್ಲಿ ಹೊಂಚು ಹಾಕಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಲೀಂಖಾನ್(27) ಬಂಧಿತ ಕಳ್ಳ. ವಿಚಾರಣೆ ವೇಳೆ ಸಹಚರ ನವಾಜ್ ಜೊತೆ ಸೇರಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.
ಕೋಲಾರ ನಗರದ ತೇರಹಳ್ಳಿ ಬೆಟ್ಟದ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗುಪ್ತ ಮಾಹಿತಿದಾರರ ಸಹಾಯದಿಂದ ಪತ್ತೆ ಹಚ್ಚಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನಿಂದ 2,50,000 ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ನವಾಜ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೋಲಾರ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.