Menu

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಬಲಿ

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರು ಕಾರ್ಖಾನೆ ಸ್ಥಳಾಂತರ ಮಾಡುವಾಗ ಈ ಅವಘಡ ನಡೆದಿದೆ.

ಒಂದು ತಿಂಗಳಿಂದ ಸ್ಥಳಾಂತರ ಕೆಲಸ ನಡೆಯುತ್ತಿತ್ತು. ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದಾಗ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಅಸ್ವಸ್ಥ ಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕಾರ್ಖಾನೆಯಲ್ಲಿ ನಾಲ್ಕು ವರ್ಷದ ಹಿಂದೆ ಅವಘಡ ಸಂಭವಿಸಿದಾಗ ರಾಸಾಯನಿಕ ಸೋರಿಕೆಯಾಗಿ ನೂರಾರು ಎಕರೆ ಬೆಳೆ ಹಾನಿಯಾಗಿತ್ತು. ಎರಡು ನಾಯಿಗಳು ಮೃತಪಟ್ಟಿದ್ದವು. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಮಾಲೀಕ ಕಾರ್ಖಾನೆ ಸ್ಥಳಾಂತರ ಮಾಡಿಸುತ್ತಿದ್ದರು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೆ ಇರುವುದರಿಂದ ಮತ್ತೆ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

Related Posts

Leave a Reply

Your email address will not be published. Required fields are marked *