Menu

ಸಕಲೇಶಪುರದಲ್ಲಿ ಮಳೆಯಿಂದ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿ: ಯುವಕರಿಬ್ಬರ ಸಾವು

ಹಾಸನ ಜಿಲ್ಲೆಯ ಸಕಲೇಶಪುರದ ಬಾಗೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ರಸ್ತೆ ಕಾಣದೆ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಅಸು ನೀಗಿದ್ದಾರೆ.

ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಶರತ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ

ನಾಲ್ವರು ಯುವಕರು ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬಾಗೆ ಸಮೀಪ ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

Related Posts

Leave a Reply

Your email address will not be published. Required fields are marked *